ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಗೋವಾ ರಾಜ್ಯದ ಪೊಳೆಂ ರಾಷ್ಟ್ರೀಯ ಹೆದ್ದಾರಿಯ ಮಿಲನ್ ಬಾರ್ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ನೋಂದಣಿಯ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Banner Ad

KA-28-EZ-6755 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಹಾಗೂ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

ಇನ್ನು ಸೋಮವಾರ ಸಂಜೆಯಷ್ಟೇ ಕಾರವಾರದ ಕಾಳಿ ಸೇತುವೆ ಮೇಲೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಒಂದೇ ದಿನ ಉತ್ತರ ಕನ್ನಡದ ಗಡಿ ಭಾಗದಲ್ಲಿ ಸಂಭವಿಸಿದ ಸರಣಿ ಅಪಘಾತಗಳು ಆತಂಕ ಮೂಡಿಸಿವೆ.

 

 

 

 

 

 

Please Share: