ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ತಾಲೂಕಿನ ಮಾಜಾಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 2026ನೇ ಸಾಲಿನ ಯುಜಿಸಿಇಟಿ ಪ್ರವೇಶದಡಿ ಖಾಲಿ ಉಳಿದಿರುವ 122 ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಪ್ರಾಂಶುಪಾಲರ ಹಂತದಲ್ಲಿ ನಿಯಮಾನುಸಾರ ಸೀಟುಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಿವಿಲ್ ಎಂಜಿನಿಯರಿಂಗ್ 46, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ 12, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ 13 ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ 51 ಸೀಟುಗಳು ಖಾಲಿ ಇವೆ.

ಅರ್ಹ ಅಭ್ಯರ್ಥಿಗಳು ನಿಗದಿತ ಶೈಕ್ಷಣಿಕ ಅರ್ಹತೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸೆ.14ರ ಸಂಜೆ 5 ಗಂಟೆಯೊಳಗೆ ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು. ನಿಗದಿತ ದಿನಾಂಕದ ಬಳಿಕ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ 9448818596, 9591190596, 9945466988, 9986927652, 9845645296, 795999357, 964655663, 6360924623 ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


