ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಮಾರ್ಪಡಿಸಿದ ಸೈಲೆನ್ಸರ್ಗಳ ವಿರುದ್ಧ ಕಾರವಾರ ಸಂಚಾರ ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ 31 ಪ್ರಕರಣಗಳು ದಾಖಲಾಗಿವೆ.
ಕಾರವಾರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೋಷಪೂರಿತ ಸೈಲೆನ್ಸರ್ ಬಳಕೆಗೆ ಸಂಬಂಧಿಸಿದ 7 ಪ್ರಕರಣಗಳು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಒಟ್ಟು 31 ಪ್ರಕರಣಗಳನ್ನು ದಾಖಲಿಸಲಾಗಿದೆ.
ಅತಿಯಾದ ಶಬ್ದ ಉಂಟುಮಾಡುವ ಮಾರ್ಪಡಿಸಿದ ಸೈಲೆನ್ಸರ್ಗಳಿಂದ ಸಾರ್ವಜನಿಕರಿಗೆ ತೊಂದರೆ ಹಾಗೂ ಶಬ್ದ ಮಾಲಿನ್ಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಾಹನಗಳ ಮೂಲ ವಿನ್ಯಾಸ ಹಾಗೂ ನಿಗದಿತ ಶಬ್ದಮಟ್ಟದ ನಿಯಮಗಳನ್ನು ಪಾಲಿಸುವಂತೆ ಸವಾರರಿಗೆ ಸೂಚಿಸಲಾಗಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.


