ಕರಾವಳಿ ವಾಯ್ಸ್ ನ್ಯೂಸ್ 

ಮಂಗಳೂರು, ಜೂ.4: ನಗರದ ಕೆಪಿಟಿ ಜಂಕ್ಷನ್ ಬಳಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

Banner Ad

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಈಶ್ವರ ನಾಗು ಮರಾಠಿ ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 3 ಕೆ.ಜಿ ತೂಕದ ಚಿಪ್ಪು ಹಂದಿಯ ಚಿಪ್ಪುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್., ಸಿಬ್ಬಂದಿಗಳಾದ ತಾರನಾಥ ಎಸ್. ಹಾಗೂ ಅಬ್ದುಲ್ ರವೂಫ್ ಭಾಗವಹಿಸಿದ್ದರು.

 

Please Share: