ಗೋಕರ್ಣ: ಪ್ರಸಿದ್ಧ ಓಂ ಕಡಲ ತೀರದಲ್ಲಿ ಶುಕ್ರವಾರ ಮುಂಜಾನೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಜಾರಿ ಸಮುದ್ರಕ್ಕೆ ಬಿದ್ದು ಪ್ರವಾಸಿಗನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ ಮೂಲದ ಲಗೇಜ್ ರಿಕ್ಷಾ ಚಾಲಕ ಅಸ್ಲಾಂ (45) ಮೃತಪಟ್ಟ ಪ್ರವಾಸಿಗನಾಗಿ ಗುರುತಿಸಲಾಗಿದೆ. ಒಟ್ಟು 10 ಜನರ ಗುಂಪು ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದು, ಕಡಲತೀರದಲ್ಲಿ ಫೋಟೋ ತೆಗೆದುಕೊಳ್ಳುವ ವೇಳೆ ಈ ಅವಘಡ ಸಂಭವಿಸಿದೆ.

ಘಟನೆಯ ನಂತರ ಮೃತದೇಹವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಸ್ಥಳಕ್ಕೆ ಗೋಕರ್ಣ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೆಲ್ಫಿ ಕ್ರೇಜ್ ಮತ್ತೊಮ್ಮೆ ಪ್ರಾಣ ಬಲಿ ಪಡೆದಿರುವ ಘಟನೆ ಪ್ರವಾಸಿಗರ ವಲಯದಲ್ಲಿ ಬೇಸರ ಮೂಡಿಸಿದೆ. ಗೋಕರ್ಣಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿರುವಂತೆ, ಸಮುದ್ರಕ್ಕೆ ಬಿದ್ದು ಸಾವನ್ನಪ್ಪುವ ಪ್ರಕರಣಗಳೂ ಹೆಚ್ಚುತ್ತಿವೆ. ಪೊಲೀಸರು ಎಷ್ಟೇ ಸುರಕ್ಷತಾ ಕ್ರಮ ಕೈಗೊಂಡರೂ, ಪ್ರವಾಸಿಗರ ನಿರ್ಲಕ್ಷ್ಯದಿಂದ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಹಾಗೂ ಹೆಚ್ಚಿನ ಜೀವ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂಬುದು ಸಾರ್ವಜನಿಕರ ಆಗ್ರಹ.

 

Please Share: