ಬೆಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 12 ಅನ್ನು ನಡೆಸುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ನ್ನು ಜಿಲ್ಲಾಡಳಿತ ಮಂಗಳವಾರ ಸಂಜೆ ಬಂದ್ ಮಾಡಿದೆ. ಜಲ ಮಾಲಿನ್ಯ ಮತ್ತು ಅನಧಿಕೃತ ಕಾರ್ಯನಿರ್ವಹಣೆ ಆರೋಪಗಳನ್ನು ಎದುರಿಸುತ್ತಿದ್ದ ಸ್ಟುಡಿಯೋಸ್ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಜೆಡಿಎಸ್ ಈ ಸಂದರ್ಭ ತಮ್ಮ ಎಕ್ಸ್ ಅಧಿಕೃತ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ, ನಟ್ಟು ಬೋಲ್ಟು ಮಿನಿಸ್ಟರ್ ಡಿ.ಕೆ. ಶಿವಕುಮಾರ್ ಕಲಾವಿದರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ಪ್ರಕಾರ, ಡಿ.ಕೆ. ಶಿವಕುಮಾರ್ ಹಿಂದೆ ಕಾರ್ಯಕ್ರಮವೊಂದರಲ್ಲಿ ಕಲಾವಿದರ ಕುರಿತು “ಯಾರ್ಯಾರಿಗೆ ನಟ್ಟು ಬೋಲ್ಟು ಟೈಟು ಮಾಡಬೇಕಿದೆ ಎಂಬುದನ್ನು ಗೊತ್ತಿದೆ” ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿ, ಜೆಡಿಎಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿದೆ.

 

Please Share: