ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅಪಘಾತದ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಗರದ ಕೊಡಿಬಾಗದಲ್ಲಿ ಭಾನುವಾರ ರಾತ್ರಿ ನಡೆದಿದೆ.

Banner Ad

ಗೋವಾ-ಕಾರವಾರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾಜಾಳಿ ಕಡೆಯಿಂದ ಕಾರವಾರದತ್ತ ಬರುತ್ತಿದ್ದ ಶಿರಸಿ ಮೂಲದ ವ್ಯಕ್ತಿಯ ಬೈಕ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಸಂಪೂರ್ಣ ಸುಟ್ಟುಹೋಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದ ಕಾರವಾರ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

 

 

 

Please Share: