ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ತಾಲೂಕಿನ ಅಮದಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಅಂಕೋಲಾದ ಅವರ್ಸಾದಿಂದ ಅಮದಳ್ಳಿಯತ್ತ ಸ್ಕೂಟಿಯಲ್ಲಿ ಬರುತ್ತಿದ್ದ ಸಚಿನ್ ತಳೇಕರ್ (38) ಅವರಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಅಮದಳ್ಳಿಯಿಂದ ಮುದಗಾದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ಮತ್ತೊಬ್ಬ ಸವಾರ ಹೆದ್ದಾರಿಯಲ್ಲಿ ಆಗಮಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಕೂಟಿಗೆ ಎದುರಾಗಿದ್ದು, ಪರಿಣಾಮವಾಗಿ ಇಬ್ಬರು ಸವಾರರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಸ್ಕೂಟಿ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಸಚಿನ್ ತಳೇಕರ್ ಅವರನ್ನು ಆಂಬ್ಯುಲೆನ್ಸ್ ಮೂಲಕ District Hospital Karwar ಗೆ ರವಾನಿಸಲಾಗಿದೆ.
ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
