ಕರಾವಳಿ ವಾಯ್ಸ್ ನ್ಯೂಸ್

ಯಲ್ಲಾಪುರ: ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟಿದ್ದ ಎಸ್‌.ಆರ್‌.ಎಸ್ ಬಸ್ ಪಟ್ಟಣದ ಹಳಿಯಾಳ ತಿರುವಿನ ಬಳಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

ಬೆಳಗಿನ ಮಂಜಿನಲ್ಲಿ ವೇಗವಾಗಿ ಸಾಗುತ್ತಿದ್ದ ಬಸ್ ಮೊದಲು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಾಲಿಗೆ ಡಿಕ್ಕಿಯಾಗಿ ನಂತರ ಪಕ್ಕದ ಮರಕ್ಕೆ ಗುದ್ದಿದೆ. ಬಸ್‌ನ ಮುಂಭಾಗ ಸಂಪೂರ್ಣವಾಗಿ ಚಿತ್ತಾರವಾದಂತಾಗಿದೆ.

ಬಸ್‌ನಲ್ಲಿ ಒಟ್ಟು 29ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮೂವರನ್ನು ತುರ್ತಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಬಳಿಕ ಕೆಲವರು ಕಿರುಚಾಟದಿಂದ ಬಸ್‌ನ ಕಿಟಕಿಗಳ ಮೂಲಕ ಹೊರಬಂದರೆ, ಕೆಲವರನ್ನು ಸ್ಥಳೀಯರು ರಕ್ಷಿಸಿ ಹೊರತೆಗೆದಿದ್ದಾರೆ.

ಸ್ಥಳಕ್ಕೆ ಯಲ್ಲಾಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Please Share: