ಕರಾವಳಿ ವಾಯ್ಸ್ ನ್ಯೂಸ್
ಹೊನ್ನಾವರ: ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಒಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಇಡಗುಂಜಿ ಕ್ರಾಸ್ ಬಳಿ ನಡೆದಿದೆ.
ಮಾವಿನಕಟ್ಟಾ ಮೂಲದ ವಸಂತ ದೇವು ಗೌಡ ಎಂಬುವವರು ಬೈಕ್‌ನಲ್ಲಿ ಮನೆ ಕಡೆ ತೆರಳುತ್ತಿದ್ದ ವೇಳೆ, ಹೊನ್ನಾವರ ದಿಕ್ಕಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಸಂತ ಗೌಡ ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ತಕ್ಷಣ ಗಾಯಾಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ಸಾಗಿಸಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.


