ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಕಾಳಗನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೆ ತರಗತಿ ವಿದ್ಯಾರ್ಥಿಯೊಬ್ಬ ಸರಿಯಾಗಿ ಓದುವುದಿಲ್ಲ ಎಂದು ಶಾಲಾ ಶಿಕ್ಷಕಿಯೊಬ್ಬರು ಮನಸೋ ಇಚ್ಛೆ ಥಳಿಸಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಸದರಿ ಘಟನೆಯ ಕುರಿತು ಉತ್ತರ ಕನ್ನಡ ಜಿಲ್ಲೆಯ ಶೈಕ್ಷಣಿಕ ಇಲಾಖೆಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದ್ದು, ವರದಿಯ ಭಾವ ಚಿತ್ರಗಳಲ್ಲಿ ಮಗುವಿನ ಬೆನ್ನಲ್ಲಿ ಬಾಸುಂಡೆಗಳನ್ನು ಗಮನಿಸಿದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು 1957ರ ನಿಯಮದಡಿ ತಪ್ಪಿತಸ್ಥ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಸದ್ಯ ವಿದ್ಯಾರ್ಥಿಯು ಚೇತರಿಸಿಕೊಂಡಿದ್ದು, ಎಂದಿನಂತೆ ಶಾಲೆಗೆ ಹಾಜರಾಗುತ್ತಿರುವುದಾಗಿ ಉತ್ತರ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Please Share: