ಶಿರಸಿ: ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ದೇಹವನ್ನು ಇಸಳೂರು ಕೆರೆಯಲ್ಲಿ ಪತ್ತೆ ಮಾಡಲಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆಕೆ ಚೀಟಿ ಬರೆದಿಟ್ಟಿದ್ದಾಳೆ ಎಂದು ಶಂಕಿಸಲಾಗಿದ್ದು, ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯ ಡಿಆರ್‌ನಲ್ಲಿ ಎಆರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣೆ ಪಿಎಸ್‌ಐ ಸಂತೋಷಕುಮಾರ್ ಅವರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇಸಳೂರು ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ


