ಸಿದ್ದಾಪುರ: ತಾಲೂಕಿನ ಕಲಗದ್ದೆ ಗ್ರಾಮದ ಗೋರನಮನೆಯಲ್ಲಿ ಬುಧವಾರ ಬೆಳಗಿನ ಜಾವ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭಾರೀ ನಷ್ಟ ಉಂಟಾಗಿದೆ.
ಗೋರನಮನೆಯ ಚಂದ್ರಕಾಂತ ನಾಗಪ್ಪ ಹೆಗಡೆ ಅವರಿಗೆ ಸೇರಿದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಪಘಾತದಲ್ಲಿ ಗೀರ್ ತಳಿಯ 8 ತಿಂಗಳ ಕರು ಸುಟ್ಟು ಸತ್ತುಹೋಗಿದೆ. ಕೊಟ್ಟಿಗೆಯ ಮೇಲ್ಚಾವಣಿ, ರೀಪು ಪಕಾಸುಗಳು ಹಾಗೂ ಜಾನುವಾರು ಮೇವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಅಂದಾಜಿನಂತೆ ಸುಮಾರು ₹50,000ಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


