ಕರಾವಳಿ ವಾಯ್ಸ್ ನ್ಯೂಸ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಸ್ಟರ್ಲಿಂಗ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಅಪಘಾತದಲ್ಲಿ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿದಂತೆ ಮೂವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 3ರಂದು ನಡೆದ ಈ ಘಟನೆಯಲ್ಲಿ ಕುಬೇರ ಸುರುಪುರ (40) ಎಂಬ ಪ್ರವಾಸಿಗ ಜಿಪ್‌ಲೈನ್ ಚಟುವಟಿಕೆಯಲ್ಲಿ ಭಾಗವಹಿಸಿದ್ದ ವೇಳೆ ಸುರಕ್ಷತಾ ಬೆಲ್ಟ್ (ಹಾರ್ನೆಸ್) ತುಂಡಾಗಿ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ಪ್ರಕರಣದ ಸಂಬಂಧ ಸ್ಟರ್ಲಿಂಗ್ ರೆಸಾರ್ಟ್‌ನ ಮಾಲೀಕ ಉಸ್ಮಾನ್ ವಹಾಬ್, ಸಿಬ್ಬಂದಿಗಳಾದ ರಾಘವೇಂದ್ರ ಶೆಟ್ಟಿ ಹಾಗೂ ಪವನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 289, 125(B) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

Please Share: