ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಎ.ಡಿ.ಆರ್. ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದಸರಾ ಹಬ್ಬದ ಅಂಗವಾಗಿ ದೇವಿಯ ಆರಾಧನೆ ಹಾಗೂ ಆಯುಧ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಆರತಿ ಬೆಳಗಿಸುವ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಮಹಿಳಾ ನ್ಯಾಯಾಧೀಶರು, ನ್ಯಾಯವಾದಿಗಳು ಮತ್ತು ಸಿಬ್ಬಂದಿಗಾಗಿ ಅರಿಶಿನ-ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶರು, ಇತರ ನ್ಯಾಯಾಲಯಗಳ ನ್ಯಾಯಾಧೀಶರು, ಸರ್ಕಾರಿ ವಕೀಲರು, ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿ ಹಾಗೂ ಪ್ಯಾರಾ ಲೀಗಲ್ ವಾಲಂಟಿಯರ್ಗಳು (ಪಿಎಲ್ವಿ) ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನ್ಯಾಯಾಲಯದ ಕಾರ್ಯಕಲಾಪಗಳಿಗೆ ತೊಂದರೆಯಾಗದಂತೆ ಕೋರ್ಟ್ ಸಮಯ ಆರಂಭಕ್ಕೂ ಮುನ್ನವೇ ಪೂಜಾ ಕಾರ್ಯಕ್ರಮವನ್ನು ಪೂರ್ಣಗೊಳಿಸಲಾಯಿತು.


