ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ತಾಲೂಕಿನ ಸುಂಕಸಾಳ ಸಮೀಪದ ಮೂಲೆಮನೆ ಬಳಿ ರವಿವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಆಕ್ಸಿಜನ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಕೆಲಕಾಲ ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.

Banner Ad

ಮಂಗಳೂರಿನತ್ತ ಸಾಗುತ್ತಿದ್ದ ಟ್ಯಾಂಕರ್‌ನ್ನು ಓವರ್‌ಟೇಕ್ ಮಾಡಲು ಮುಂದಾದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಕ್ಸಿಜನ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಎರಡು ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ವಾಹನಗಳ ದಟ್ಟಣೆ ಉಂಟಾಯಿತು.

ಘಟನೆಯ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಂಕೋಲಾ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡು, ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಗೊಳಿಸಿದರು.

ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Please Share: