ಕರಾವಳಿ ವಾಯ್ಸ್ ನ್ಯೂಸ್
ಗೋಕರ್ಣ: ಕುಡ್ಲೆ ಕಡಲ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗುತ್ತಿದ್ದ ಬಿಹಾರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ರಕ್ಷಿಸಿದ ಘಟನೆ ಬುಧವಾರ ನಡೆದಿದೆ.
ಬಿಹಾರ ಮೂಲದ ಮನುರಾಜ್ (22) ರಕ್ಷಣೆಗೊಳಗಾದ ಪ್ರವಾಸಿಗ. ಸ್ನೇಹಿತರೊಂದಿಗೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಈತ ಕುಡ್ಲೆ ಕಡಲ ತೀರದಲ್ಲಿ ಸಮುದ್ರಕ್ಕಿಳಿದಿದ್ದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿದ್ದಾನೆ.
ಈ ವೇಳೆ ಮೂವರು ಪ್ರವಾಸಿಗರು ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಮೈಸ್ಟಿಕ್ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ಮೂವರನ್ನು ರಕ್ಷಿಸಿದ್ದಾರೆ. ಈ ಪೈಕಿ ಮನುರಾಜ್‌ಗೆ ಹೆಚ್ಚಿನ ಆರೈಕೆಯ ಅಗತ್ಯವಿದ್ದ ಕಾರಣ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


