ಕರಾವಳಿ ವಾಯ್ಸ್ ನ್ಯೂಸ್ 

ಯಲ್ಲಾಪುರ: ಅಕ್ರಮವಾಗಿ ವನ್ಯಜೀವಿಗಳನ್ನು ಬೇಟೆಯಾಡಿ ಮಾಂಸ ದಾಸ್ತಾನು ಮಾಡಿದ್ದ ಆರೋಪದ ಮೇಲೆ ತಂದೆ-ಮಗನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿರುವ ಘಟನೆ ತಾಲೂಕಿನ ಹಳಬೈಲ್ ಶಾಖಾ ವ್ಯಾಪ್ತಿಯ ಕಣ್ಣಿಗೇರಿ ಗ್ರಾಮದ ಹಳಿಯಾಳ ಕ್ರಾಸ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Banner Ad

ಹಳಿಯಾಳ ಕ್ರಾಸ್ ನಿವಾಸಿಗಳಾದ ಇನಾಸ್ ಬಸ್ತ್ಯಾಂವ್ ಸಿದ್ದಿ (55) ಹಾಗೂ ಅವರ ಪುತ್ರ ಪ್ರಕಾಶ್ ಇನಾಸ್ ಸಿದ್ದಿ (27) ಬಂಧಿತರು.

ಖಚಿತ ಮಾಹಿತಿ ಆಧರಿಸಿ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಬೇಟೆಯಾಡಿ ಕೊಲ್ಲಲಾಗಿದೆ ಎನ್ನಲಾದ ಎರಡು ಗಂಡು ಉಡಗಳ ಮೃತದೇಹ ಪತ್ತೆಯಾಗಿವೆ. ಬೇಟೆಗೆ ಬಳಸಲಾಗಿದೆ ಎನ್ನಲಾದ ಎರಡು ಕತ್ತಿ ಹಾಗೂ ಒಂದು ಕೊಡಲಿಯನ್ನೂ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್ ಅವರ ನೇತೃತ್ವದಲ್ಲಿ ಹಾಗೂ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎಚ್. ನಾಯ್ಕ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

 

Please Share: