ಕರಾವಳಿ ವಾಯ್ಸ್ ನ್ಯೂಸ್

ಶಿರಸಿ: ರಾಜ್ಯದ ಪ್ರಮುಖ ಶಕ್ತಿಪೀಠಗಳಲ್ಲೊಂದಾದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಆದರೆ, ಜಾತ್ರೆಯ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಗೊಂಡಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ನಗರದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜಾತ್ರೆಯ ದಿನಾಂಕ ನಿಗದಿಯಾಗಿದೆ ಎಂಬ ಸಂದೇಶಗಳು ಹರಿದಾಡುತ್ತಿದ್ದು, ಇವು ಸಂಪೂರ್ಣ ಸುಳ್ಳು ಹಾಗೂ ತಪ್ಪು ಮಾಹಿತಿಯಾಗಿವೆ ಎಂದು ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

ಜಾತ್ರೆಯ ದಿನಾಂಕ ನಿಗದಿ ಮಾಡುವುದಕ್ಕೆ ಧಾರ್ಮಿಕ ವಿಧಿ ವಿಧಾನಗಳು ಹಾಗೂ ವಿಶೇಷ ಮುಹೂರ್ತ ಪಾಲಿಸಬೇಕಾಗಿದ್ದು, ಆ ಪ್ರಕ್ರಿಯೆ ಇನ್ನೂ ಮುಗಿದಿಲ್ಲ ಎಂದು ತಿಳಿಸಿದ್ದಾರೆ.

“ಕೆಲವರು ಫೇಕ್‌ಬುಕ್, ವಾಟ್ಸಪ್‌ನಲ್ಲಿ ತಪ್ಪು ದಿನಾಂಕಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಇಂತಹ ಸುಳ್ಳು ಮಾಹಿತಿಗೆ ನಂಬಿಕೆ ಇಡಬಾರದು. ಜಾತ್ರೆಯ ಅಧಿಕೃತ ದಿನಾಂಕವನ್ನು ದೇವಸ್ಥಾನದ ಆಡಳಿತ ಮಂಡಳಿಯೇ ಪ್ರಕಟಿಸುತ್ತದೆ” ಎಂದು ಸ್ಪಷ್ಟನೆ ನೀಡಲಾಗಿದೆ.

 

Please Share: