ಕರಾವಳಿ ವಾಯ್ಸ್ ನ್ಯೂಸ್ 

ಅಂಕೋಲಾ: ಗ್ರಾಮೀಣ ಶಾಲೆಯ ಕ್ರೀಡಾ ಪ್ರತಿಭೆಗಳು ಜಿಲ್ಲಾಮಟ್ಟದಲ್ಲಿ ಮಿಂಚಿದ್ದು, ಅವರ್ಸಾ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆಯ 14 ವರ್ಷದೊಳಗಿನ ಬಾಲಕರ ಖೋ ಖೋ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

Banner Ad

ತಾಲೂಕಿನ ಶೇಟಗೇರಿ ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಅವರ್ಸಾ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿ ಮೊದಲ ಸ್ಥಾನ ಗಳಿಸಿತು. ತಂಡದ ಈ ಗೆಲುವಿನೊಂದಿಗೆ ವಿಭಾಗ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿರುವುದು ಶಾಲೆ ಹಾಗೂ ಅವರ್ಸಾ ಗ್ರಾಮದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ತಂಡದ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಪರಿವೀಕ್ಷಕರು, ಅವರ್ಸಾ ಸಿಆರ್‌ಪಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮುಖ್ಯಶಿಕ್ಷಕರು ಮತ್ತು ಸಹಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪಾಲಕರು ಹಾಗೂ ಊರಿನ ನಾಗರಿಕರು ಕೂಡ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

 

Please Share: