ಕರಾವಳಿ ವಾಯ್ಸ್ ನ್ಯೂಸ್
ಉಡುಪಿ: ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ನಡೆದಿದೆ.
ಹೆಬ್ರಿ ಬಳಿ ವೈನ್ ಶಾಪ್ ನಡೆಸುತ್ತಿದ್ದ ಸುದೀಪ್ ಭಂಡಾರಿ ಅವರು ರೈಲಿಗೆ ತಲೆಕೊಟ್ಟು ಜೀವ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


