ಕರಾವಳಿ ವಾಯ್ಸ್ ನ್ಯೂಸ್
ರಾಮನಗರ: ಎರಡು ಟ್ರಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಅನಮೋಡ್ ಸಮೀಪದ ಕ್ಯಾಸಲ್‌ರಾಕ್ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಗೋವಾಕ್ಕೆ ತೆರಳುತ್ತಿದ್ದ ಟ್ರಕ್ ಹಾಗೂ ಗೋವಾದಿಂದ ಬರುತ್ತಿದ್ದ ಮತ್ತೊಂದು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ಟ್ರಕ್‌ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಾಹನಗಳಿಗೆ ಭಾರೀ ಹಾನಿಯಾಗಿದೆ.
ಗಂಭೀರವಾಗಿ ಗಾಯಗೊಂಡ ಇಬ್ಬರು ಚಾಲಕರನ್ನು ಸ್ಥಳೀಯರ ನೆರವಿನಿಂದ ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.
