ಕರಾವಳಿ ವಾಯ್ಸ್ ನ್ಯೂಸ್
ಭಟ್ಕಳ: ರಜೆ ದಿನದ ವಿಶೇಷ ತರಗತಿಗೆ ಹಾಜರಾಗಿ ತರಗತಿ ಮುಗಿದ ಬಳಿಕ ಕೆರೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಯೊಬ್ಬ ನೀರು ಪಾಲಾಗಿರುವ ದುರ್ಘಟನೆ ಭಟ್ಕಳದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್ನ ಹತ್ತನೇ ತರಗತಿ ವಿದ್ಯಾರ್ಥಿ ಶಶಿಧರ್ ಯೋಗೇಶ್ ಮೊಗೇರ್ (15) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.
ವಿಶೇಷ ತರಗತಿಯನ್ನು ಮುಗಿಸಿ ಮಧ್ಯಾಹ್ನ 12.45ರ ಸುಮಾರಿಗೆ ಮೀನು ಹಿಡಿಯಲು ತೆರಳಿದ್ದರು. ಗಾಳ ಹಾಕಿ ಮೀನು ಹಿಡಿಯಿವ ವೇಳೆ ಶಶಿಧರ್ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ. ಸಹಪಾಠಿಗಳು ಹಾಗೂ ಸ್ಥಳೀಯರು ಪ್ರಯತ್ನಿಸಿದರೂ ಜೀವ ಉಳಿಸಲಾಗಲಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಭಟ್ಕಳ ಡಿವೈಎಸ್ಪಿ ಮಹೇಶ್ ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


