ಕರಾವಳಿ ವಾಯ್ಸ್ ನ್ಯೂಸ್

ಕಾರವಾರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆ, ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ ಬ್ಲಾಕ್ ಎಜುಕೇಷನ್ ಆಫೀಸರ್ (BEO) ಅವರ ಪ್ರಕಟಣೆಯ ಪ್ರಕಾರ, ಮಾನ್ಯ ತಹಸೀಲ್ದಾರ್ ರವರ ಅನುಮೋದನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆಯ ಕ್ರಮವಾಗಿ ಇಂದು (ಶನಿವಾರ) ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Please Share: