ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಅರ್ಗಾ ಫ್ಲೈಓವರ್ ಬಳಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ಬಳಿಕ ಬೈಕ್ ಹೊತ್ತಿ ಉರಿದಿದೆ.
ಮೃತರನ್ನು ಬಜಾಜ್ ಫೈನಾನ್ಸ್ ಸಿಬ್ಬಂದಿ ಬಿಣಗಾದ ಒಕ್ಕಲಕೇರಿ ನಿವಾಸಿ ಗಣಪತಿ ಗೌಡ (42) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಅದೇ ವೇಳೆ ವಾಹನದ ಚಕ್ರ ಸವಾರನ ತಲೆಯ ಮೇಲೆ ಹರಿದು ಹೋಗಿದೆ ಎನ್ನಲಾಗಿದೆ. ಪರಿಣಾಮ ತಲೆ ಛಿದ್ರಗೊಂಡು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಬೈಕ್ಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಭೀಕರ ದೃಶ್ಯ ಕಂಡು ಸ್ಥಳದಲ್ಲಿದ್ದ ಜನರು ಬೆಚ್ಚಿಬಿದ್ದಿದ್ದಾರೆ.
ಘಟನೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನದ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


