ಕರಾವಳಿ ವಾಯ್ಸ್ ನ್ಯೂಸ್ 

ಜೋಯಿಡಾ: ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿಯೋರ್ವನನ್ನು ಅನಮೋಡ ತನಿಖಾ ಠಾಣೆಯ ಅಬಕಾರಿ ಅಧಿಕಾರಿಗಳು ಬಂಧಿಸಿ, 28.25 ಲೀಟರ್ ಮದ್ಯ ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.

Banner Ad

ಆ.28ರ ಮುಂಜಾನೆ 1.30ರ ಸುಮಾರಿಗೆ ಅನಮೋಡ ತನಿಖಾ ಠಾಣೆಯಲ್ಲಿ ಅಬಕಾರಿ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, KA-25/EV-4199 ನೋಂದಣಿ ಸಂಖ್ಯೆಯ ಹೋಂಡಾ ಆಕ್ಟಿವಾವನ್ನು ತಪಾಸಣೆಗೊಳಪಡಿಸಿದಾಗ ಎರಡು ಏರ್‌ಬ್ಯಾಗ್‌ಗಳಲ್ಲಿ ಗೋವಾ ರಾಜ್ಯದ ವಿವಿಧ ನಮೂನೆಯ ಮದ್ಯದ ಬಾಟಲಿಗಳು ಪತ್ತೆಯಾಗಿವೆ.

ಈ ಸಂಬಂಧ ಹುಬ್ಬಳ್ಳಿಯ ವಿನೋಬನಗರ, ಗದಗ ರಸ್ತೆ ನಿವಾಸಿ ನವೀನ್ ಚೆನ್ನಯ್ಯ ದಾರ ಎಂಬಾತನನ್ನು ಬಂಧಿಸಲಾಗಿದೆ. ಗೋವಾದಿಂದ ಮದ್ಯವನ್ನು ತನ್ನ ಮನೆಗೆ ಮಾರಾಟ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಈತ ಸಿಕ್ಕಿಬಿದ್ದಿದ್ದಾನೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಜಪ್ತಿ ಮಾಡಲಾದ ದ್ವಿಚಕ್ರ ವಾಹನದ ಅಂದಾಜು ಮೌಲ್ಯ ₹60 ಸಾವಿರ ಹಾಗೂ ಮದ್ಯದ ಮೌಲ್ಯ ₹16,500 ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಅಬಕಾರಿ ನಿರೀಕ್ಷಕ ಮಹೇಂದ್ರ ಎಸ್. ನಾಯ್ಕ್, ಮುಖ್ಯ ಪೇದೆಗಳಾದ ಸಂತೋಷ್ ಸುಬ್ಬಣ್ಣವರ್, ಅಲಿ ಸಾಬ್ ಅವರಾದಿ ಹಾಗೂ ಪೇದೆ ಗಜಾನನ ನಾಯ್ಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ದಾಂಡೇಲಿ ವಲಯದ ಅಬಕಾರಿ ಉಪನಿರೀಕ್ಷಕ ಕರೆಪ್ಪ ಹೊಳೆನವರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Please Share: