ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ಓವರ್‌ಲೋಡ್‌ ಮೂಲಕ ಭಾರಿ ಗಾತ್ರದ ಶಿಲೆ ಕಲ್ಲುಗಳನ್ನು ಸಾಗಿಸುತ್ತಿದ್ದ 17 ಲಾರಿಗಳನ್ನು ಆರ್‌ಟಿಓ ಅಧಿಕಾರಿಗಳು ಹೊನ್ನಾವರದಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

Banner Ad

ಮಂಗಳೂರಿನ ಪೆಣಂಬೂರಿನಿಂದ ಹೊನ್ನಾವರದ ಕಡೆಗೆ ಸಾಗುತ್ತಿದ್ದ ಲಾರಿಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಶಿಲೆ ಕಲ್ಲುಗಳನ್ನು ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಈ ಕಲ್ಲುಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಆರ್‌ಟಿಓ ಅಧಿಕಾರಿಗಳು ಲಾರಿಗಳನ್ನು ತಡೆದು ಪರಿಶೀಲನೆ ನಡೆಸಿ, ಓವರ್‌ಲೋಡ್‌ ದೃಢಪಟ್ಟ ಹಿನ್ನೆಲೆಯಲ್ಲಿ 17 ಲಾರಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಧಿಕಾರಿಗಳ ಈ ಕಾರ್ಯಾಚರಣೆಯಿಂದ ನಿಯಮ ಉಲ್ಲಂಘಿಸಿ ಸರಕು ಸಾಗಣೆ ನಡೆಸುವ ವಾಹನ ಮಾಲೀಕರಲ್ಲಿ ಆತಂಕ ಮೂಡಿದೆ.

 

Please Share: