ಶಿರಸಿ: ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಆಗ್ರಹಿಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶುಕ್ರವಾರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಇಳಿದರು.

ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಸರಕಾರ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಾಲೇಜಿನ ಮುಂಭಾಗದಲ್ಲಿ ಧರಣಿ ನಡೆಸಿದರು. ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಅರಣ್ಯ ಇಲಾಖೆ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್, ಉಪಾಧ್ಯಕ್ಷ ಸುದೀಪ್, ಕಾರ್ಯದರ್ಶಿ ವಿಕಾಸ್ ಎಜಿ, ಯಶಸ್ಸು ಎಮ್, ಅವಿನಾಶ ಹಾಗೂ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Please Share: