ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಎಸ್.ವಿ. ಸಂಕನೂರು ಅವರನ್ನು ಗೆಲ್ಲಿಸಲು ಜೆಡಿಎಸ್ನಿಂದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಸೆ.29ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲೆಗೆ ಜಿಲ್ಲಾಧ್ಯಕ್ಷ ಸೂರಜ್ ಸೋನಿ ನಾಯ್ಕ, ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹಾಗೂ ಮುಖಂಡ ಉಪೇಂದ್ರ ಎಲ್. ಪೈ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.
ಧಾರವಾಡ ಜಿಲ್ಲೆಗೆ ನಗರಾಧ್ಯಕ್ಷ ಗುರುರಾಜ ಹುಣಶಿಮರದ, ಮಾಜಿ ಸಚಿವರಾದ ಹನುಮಂತಪ್ಪ ವೈ. ಆಲ್ನೋಡ್ ಹಾಗೂ ಕಲ್ಲಪ್ಪ ನಾಗಪ್ಪ ಗದ್ದಿ, ಜಿಲ್ಲಾಧ್ಯಕ್ಷ ಬಿ.ಬಿ. ಗಂಗಾಧರಮಠ, ಮಾಜಿ ಶಾಸಕ ವೀರಭದ್ರಪ್ಪ ಹಾಲಅರವಿ ಮತ್ತು ಮುಖಂಡ ಶಿವಶಂಕರ ಕಲ್ಲೂರ ಅವರನ್ನು ನೇಮಿಸಲಾಗಿದೆ.
ಗದಗ ಜಿಲ್ಲೆಗೆ ಮುಖಂಡ ವೆಂಕನಗೌಡ ಆರ್. ಗೋವಿಂದೇಗೌಡ ಹಾಗೂ ಹಾವೇರಿ ಜಿಲ್ಲೆಗೆ ಜಿಲ್ಲಾಧ್ಯಕ್ಷ ಮಂಜುನಾಥ ಎಸ್. ಗೌಡ ಶಿವಣ್ಣನವರ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅ.23ರಂದು ನಡೆಯಲಿದ್ದು, ಉತ್ತರ ಕನ್ನಡ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೆಡಿಎಸ್ ಉಸ್ತುವಾರಿಗಳು ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.


