ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಕಾರವಾರ ನಗರಸಭೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶ ಚತುರ್ಥಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Banner Ad

ಸೆ.14ರಂದು ಶ್ರೀ ಮಹಾಗಣಪತಿ ಮೂರ್ತಿ ಪ್ರತಿಷ್ಠಾಪನೆ ನೆರವೇರಿದ್ದು, ಸೆ.18ರಂದು ಶುಕ್ರವಾರ ಗಣಹೋಮದ ಬಳಿಕ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನ್ನಸಂತರ್ಪಣೆ ನಡೆಯಲಿದೆ. ಈ ಅನ್ನಸಂತರ್ಪಣೆಯನ್ನು ವಿಧಾನಪರಿಷತ್ ಶಾಸಕ ಗಣಪತಿ ಉಳ್ವೆಕರ್ ಹಾಗೂ ಕಾರವಾರ ನಗರಸಭೆಯ ಮಾಜಿ ಅಧ್ಯಕ್ಷ ಡಾ. ನಿತಿನ್ ಪಿಕಳೆ ಅವರು ಪ್ರಾಯೋಜಿಸಿದ್ದಾರೆ.

ಸೆ.21ರಂದು ಸೋಮವಾರ ಸಂಜೆ 6 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಎಲ್ಲ ಕಾರ್ಯಕ್ರಮಗಳಲ್ಲೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಮಹಾಗಣಪತಿಯ ಪ್ರಸಾದ ಸ್ವೀಕರಿಸುವಂತೆ ಸಮಿತಿ ಅಧ್ಯಕ್ಷರು ಕೋರಿದ್ದಾರೆ.

ಕಾರವಾರ ನಗರಸಭೆಯ ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರ ನೌಕರರು ಸರ್ವ ಭಕ್ತರಿಗೆ ಕಾರ್ಯಕ್ರಮಕ್ಕೆ ಸುಸ್ವಾಗತ ಕೋರಿದ್ದಾರೆ.

 

 

Please Share: