

ಕರಾವಳಿ ವಾಯ್ಸ್ ನ್ಯೂಸ್
ಕಾರವಾರ:- ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಅಲೈಡ್ ಹೆಲ್ತ್ ಸೇನ್ಸ್ (Allied Health Sciences) ಪದವಿ ಕೋರ್ಸಗಳ ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ಭರ್ತಿಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
B.Sc. OT & AT (Operation Theatre & Anesthesia Technology)-10, BMLT (B Sc Medical Laboratory Technology)- 21 ಸೀಟುಗಳು ಖಾಲಿ ಇವೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಕೆಇಎ 2026 (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ನಡೆಸಿದ ಪರೀಕ್ಷೆಯನ್ನು ಬರೆದಿರಬೇಕು. ಆಸಕ್ತರು ಅರ್ಜಿ ಸಲ್ಲಿಸಲು ಮತ್ತು ಕಾಲೇಜಿಗೆ ಭೇಟಿ ನೀಡಲು ನ.15 ಕೊನೆಯ ದಿನವಾಗಿದೆ.
ಆಸಕ್ತಿಯುಳ್ಳ ಮತ್ತು ಅರ್ಹ ವಿದ್ಯಾರ್ಥಿಗಳು ಅಗತ್ಯ ಮೂಲ ದಾಖಲಾತಿಗಳೊಂದಿಗೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ನೇರವಾಗಿ ಭೇಟಿ ನೀಡಿ ಪ್ರವೇಶಾತಿ ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಿರಿ ಮೊ: 8618682078 ಗೆ ಸಂಪರ್ಕಿಸುAವAತೆ ಕಾರಾವರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


