ಕರಾವಳಿ ವಾಯ್ಸ್ ನ್ಯೂಸ್
ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸಮೀಪದ ಸುಳಿಮುರ್ಕಿ ಕ್ರಾಸ್ ಬಳಿ ಶನಿವಾರ ರಾತ್ರಿ ಭಟ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನಲ್ಲಿ ಒಟ್ಟು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅವರಲ್ಲಿ 15 ಮಂದಿಗೆ ಗಂಭೀರ ಪೆಟ್ಟಾಗಿದ್ದು ಎಂದು ತಿಳಿದು ಬಂದಿದೆ. ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಡಿಕ್ಕಿಯಿಂದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆಯೆಂದು ಶಂಕಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಹೊನ್ನಾವರ ಹಾಗೂ ಸಿದ್ದಾಪುರದಿಂದ 10 ಕ್ಕೂ ಹೆಚ್ಚು ಅಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಅದೇ ರೀತಿ ಅಗ್ನಿಶಾಮಕ ದಳದ ಸಿಬ್ಬಂದಿಯೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಥಳದಿಂದ ಬಂದ ಪ್ರಾಥಮಿಕ ವರದಿ ಪ್ರಕಾರ ಹಲವಾರು ಪ್ರಯಾಣಿಕರಿಗೆ ತೀವ್ರ ಪೆಟ್ಟಾಗಿದ್ದು ಓರ್ವ ಮೃತಪ್ಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


