ಕರಾವಳಿ ವಾಯ್ಸ್ ನ್ಯೂಸ್ 

ಶಿರಸಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿರಸಿ–ಹುಬ್ಬಳ್ಳಿ ರಸ್ತೆಯ ಇಸಳೂರು ಸಮೀಪದ ದೊಡ್ಡೂರು ಕ್ರಾಸ್‌ನಲ್ಲಿ ನಡೆದಿದೆ.

Banner Ad

ಮೃತರನ್ನು ಬುಗುಡಿಕೊಪ್ಪ ಗ್ರಾಮದ ನಿವಾಸಿ ಸುನಿಲ್ ಎಂದು ಗುರುತಿಸಲಾಗಿದೆ. ಹಾವೇರಿ–ಶಿರಸಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿರಸಿ ಸಂಚಾರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು. ಈ ಕುರಿತು ಶಿರಸಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

 

Please Share: