ಕರಾವಳಿ ವಾಯ್ಸ್ ನ್ಯೂಸ್

ಹೊನ್ನಾವರ: ಬಾದಾಮಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ತಡರಾತ್ರಿ ಅಪಘಾತಕ್ಕೊಳಗಾಗಿ ಕಂದಕಕ್ಕೆ ಉರುಳಿದ ಘಟನೆ ರವಿವಾರ ನಡೆದಿದೆ.

ಬಸ್ ಪಲ್ಟಿಯಾಗಿದ ಪರಿಣಾಮ ಬಸ್‌ನಲ್ಲಿ ಇದ್ದ 29 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ, ಕೆಲವರಿಗೆ ಮಧ್ಯಮ ಪ್ರಮಾಣದ ಪೆಟ್ಟುಗಳೂ ಉಂಟಾಗಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಗಂಭೀರ ಗಾಯಗೊಂಡಿದ್ದ ಪ್ರಯಾಣಿಕ ದ್ಯಾಮಣ್ಣ ಫಕೀರಪ್ಪ ಮಂಗಳಗುಡ್ಡ ಅವರನ್ನು ಹೆಚ್ಚುವರಿ ಚಿಕಿತ್ಸೆಗೆ ಗೋವಾ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆ ಕಾರವಾರದಲ್ಲಿ ಅವರು ಸಂಭವನೀಯವಾಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಅಧಿಕಾರಿಗಳು ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ.

 

 

Please Share: