ಕರಾವಳಿ ವಾಯ್ಸ್ ನ್ಯೂಸ್

ಅಂಕೋಲಾ: ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

Banner Ad

ಮೃತ ಯುವಕನನ್ನು ಪವನ್ ಭಟ್ (24) ಎಂದು ಗುರುತಿಸಲಾಗಿದೆ. ಪವನ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಇದೇ ಗ್ರಾಮದ ಯುವತಿಯೊಂದರೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನೆಂದು ತಿಳಿದುಬಂದಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಪವನ್ ಒತ್ತಾಯಿಸಿದ್ದನು. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎನ್ನಲಾಗಿದೆ.

ಯುವತಿಯ ನಿರಾಕರಣೆಯಿಂದ ತೀವ್ರವಾಗಿ ಮನನೊಂದು ಪವನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

ಘಟನೆಯ ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

Please Share: