ಕರಾವಳಿ ವಾಯ್ಸ್ ನ್ಯೂಸ್

ಯಲ್ಲಾಪುರ: ಪಟ್ಟಣದ ಕಾಳಮ್ಮ ನಗರದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ವಿವಾಹಿತ ಮಹಿಳೆಯೊಬ್ಬರನ್ನು ಕುತ್ತಿಗೆಗೆ ಚಾಕು ಇರಿದು ಹತ್ಯೆ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ರಂಜಿತಾ ಮಲ್ಲಪ್ಪ ಬನ್ಸೋಡೆ (30) ಎಂದು ಗುರುತಿಸಲಾಗಿದ್ದು, ಆರೋಪಿ ರಫಿಕ್ ಎಂಬಾತ ಎಂದು ಪೊಲೀಸರು ತಿಳಿಸಿದ್ದಾರೆ. ರಂಜಿತಾ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿಳು. ಇಬ್ಬರೂ ಯಲ್ಲಾಪುರ ಮೂಲದವರಾಗಿದ್ದಾರೆ.

ಶನಿವಾರ ಮಧ್ಯಾಹ್ನ ಸುಮಾರು 1.50ರ ಸುಮಾರಿಗೆ ಕಾಳಮ್ಮ ನಗರ ಪ್ರದೇಶದಲ್ಲಿ ರಫಿಕ್ ರಂಜಿತಾಳ ಕುತ್ತಿಗೆಗೆ ಚಾಕು ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಂಜಿತಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.

ಯಲ್ಲಾಪುರ ತಾಲೂಕು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸಕ ಡಾ. ಸುಶಿಷ್ಠ ಗಣಾಚಾರಿ ಅವರು ಸಮಯೋಚಿತವಾಗಿ ಪ್ರಥಮ ಚಿಕಿತ್ಸೆ ನೀಡಿ, ಹೊಲಿಗೆ ಹಾಕಿದರು. ನಂತರ ಸ್ಥಿತಿ ಗಂಭೀರವಾಗಿದ್ದರಿಂದ ಮಧ್ಯಾಹ್ನ 2.30ರ ಸುಮಾರಿಗೆ ಕಿಮ್ಸ್ ಹುಬ್ಬಳ್ಳಿಗೆ ರೆಫರ್ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಂಜಿತಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಮಾಹಿತಿ ಪಡೆದ ಶಾಸಕ ಶಿವರಾಮ್ ಹೆಬ್ಬಾರ್ ಅವರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಮಯಪಾಲನೆಯ ಸೇವೆಯನ್ನು ಅಭಿನಂದಿಸಿದರು.

ಕೊಲೆ ಮಾಡಿದ ಬಳಿಕ ಆರೋಪಿ ರಫಿಕ್ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಯಲ್ಲಾಪುರ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

Please Share: