ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಇಲ್ಲಿನ ಮೆಡಿಕಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬೈಕ್ ಗೋವಾದ ಪೋಳೆಂನಲ್ಲಿ ಸೋಮವಾರ ತಡರಾತ್ರಿ ಅಪಘಾತಕ್ಕೀಡಾಗಿ, ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Banner Ad

ಮೃತರನ್ನು ಕಾರವಾರ ಮೆಡಿಕಲ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ, ಚಿತ್ರದುರ್ಗ ಮೂಲದ ಪ್ರೀತಂ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳಿಬ್ಬರೂ ಊಟಕ್ಕಾಗಿ ಪೋಳೆಂಗೆ ತೆರಳಿದ್ದು, ವಾಪಸ್ ಕಾರವಾರ ಕಡೆಗೆ ಬರುತ್ತಿದ್ದ ವೇಳೆ ಕ್ಲೌಡ್ 9 ಹೋಟೆಲ್ ಸಮೀಪ ಬೈಕ್ ಅಪಘಾತಕ್ಕೀಡಾಗಿದೆ. ಅಪಘಾತದ ತೀವ್ರತೆಗೆ ಪ್ರೀತಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಮತ್ತೋರ್ವ ವಿದ್ಯಾರ್ಥಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆದ್ದಾರಿಯಲ್ಲಿ ಬೀದಿ ದೀಪಗಳ ಕೊರತೆ ಇರುವುದರಿಂದಲೇ ಅಪಘಾತ ಸಂಭವಿಸಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Please Share: