ಕಾರವಾರ: ನಗರದ ಅಮೃತ್ ಓರಾ ಹೋಟೆಲ್‌ನಲ್ಲಿ ಸೋಮವಾರ ರಾತ್ರಿ ದುರಂತ ಘಟನೆ ಸಂಭವಿಸಿದೆ. ರಷ್ಯಾ ಪ್ರಜೆಯೊಬ್ಬರು ಹೋಟೇಲ್‌ನ ಮೊದಲ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಇವಾನ್ ಡೆನೆವಾ (40) ಎಂದು ಗುರುತಿಸಲಾಗಿದ್ದು, ಅವರು ಕದಂಬ ನೌಕಾನೆಲೆಯ ಕೆಲಸಕ್ಕಾಗಿ ಕಾರವಾರಕ್ಕೆ ಬಂದಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಹೋಟೇಲ್‌ನ ಬಾಲ್ಕನಿಯಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು ಗೋವಾದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆಯ ಮಾಹಿತಿಯನ್ನು ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

 

 

Please Share: