ಕರಾವಳಿ ವಾಯ್ಸ್ ನ್ಯೂಸ್

ಹೊನ್ನಾವರ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಪ್ರಾಪ್ತೆಯೊಬ್ಬಳ ಗರ್ಭಧಾರಣಾ ಪ್ರಕರಣ ಹೊಸ ತಿರುವು ಪಡೆದಿದೆ. ಪೋಕ್ಸೋ ಕಾಯ್ದೆಯಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳೆಯೊಬ್ಬಳನ್ನೂ ಪೊಲೀಸರು ಬಂಧಿಸಿದ್ದಾರೆ.

ಬಂಧಿತೆ ಗುಣವಂತೆಯ ಶಾಂತಿಕಾ ಗೌಡ ಎಂಬವಳು. ಆಕೆ ಅಪ್ರಾಪ್ತೆಯೊಂದಿಗೆ ಯುವಕರಿಗೆ ದೈಹಿಕ ಸಂಪರ್ಕ ಬೆಳೆಸಲು ಪ್ರೇರಣೆ ನೀಡಿದ್ದಾಳೆ ಎಂಬ ಆರೋಪದ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಪ್ರಕರಣ ಬೆಳಕಿಗೆ ಬಂದ ನಂತರ ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಮೊದಲು ಮೂವರು ಯುವಕರನ್ನು ಬಂಧಿಸಲಾಗಿತ್ತು. ಬಳಿಕ ಮತ್ತೊಬ್ಬ ಯುವಕನನ್ನೂ ವಶಕ್ಕೆ ತೆಗೆದುಕೊಳ್ಳಲಾಯಿತು. ಇದೀಗ ಮಹಿಳೆಯ ಬಂಧನದಿಂದ ಪ್ರಕರಣದಲ್ಲಿ ಒಟ್ಟು ಐದು ಮಂದಿ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಹೊನ್ನಾವರ ಪೊಲೀಸರು ಆರೋಪಿಗಳ ವಿಚಾರಣೆಯನ್ನು ಮುಂದುವರೆಸಿದ್ದಾರೆ.

ಅಪ್ರಾಪ್ತೆಯ ಜೀವದೊಂದಿಗೆ ಆಟವಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯ ವ್ಯಕ್ತಪಡಿಸಿದ್ದಾರೆ.

 

 

Please Share: