ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಸಮೀಪದ ಕಾನೂರು ಜಲಪಾತದಲ್ಲಿ ಫೋಟೋಶೂಟ್ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದ ವಿದ್ಯಾರ್ಥಿಯ ಶವ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.

ಧಾರವಾಡ ಮೂಲದ, ಹಳಿಯಾಳ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂತಿಮ ವರ್ಷದ ವಿದ್ಯಾರ್ಥಿ ಸುಹೇಲ್ ಶೇಖ್ (21) ಅವರು ಮಂಗಳವಾರ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು.

ಅಪಘಡದ ನಂತರ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ರಾತ್ರಿವರೆಗೂ ಶೋಧ ಕಾರ್ಯ ಮುಂದುವರೆಸಿದರೂ, ಕತ್ತಲಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಬುಧವಾರ ಬೆಳಿಗ್ಗೆ ಪುನಃ ಪ್ರಾರಂಭವಾದ ಶೋಧ ಕಾರ್ಯಾಚರಣೆಯಲ್ಲಿ, ಬೆಳಿಗ್ಗೆ ಸುಮಾರು 11.30ಕ್ಕೆ ಸುಹೇಲ್ ಅವರ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Please Share: