ಬೆಂಗಳೂರು: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸತೀಶ್ ಸೈಲ್ ಬಂಧನಕ್ಕೆ ಯಾವುದೇ ಅಗತ್ಯವಿರಲಿಲ್ಲ. ಈ ಪ್ರಕರಣ 2010ರಿಂದಲೇ ವಿಚಾರಣೆಯಲ್ಲಿದೆ. ಆದರೆ ಕಾಂಗ್ರೆಸ್ ಶಾಸಕರನ್ನೇ ಗುರಿಯಾಗಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಹಿಂದಿನ ಉದ್ದೇಶ ಕಾಂಗ್ರೆಸ್ ನಾಯಕರಿಗೆ ರಾಜಕೀಯವಾಗಿ ತೊಂದರೆ ನೀಡುವುದೇ ಹೊರತು ನ್ಯಾಯ ನೀಡುವುದು ಅಲ್ಲ” ಎಂದು ವಾಗ್ದಾಳಿ ನಡೆಸಿದರು.

Please Share: