ಕರಾವಳಿ ವಾಯ್ಸ್ ನ್ಯೂಸ್

ಕಾರವಾರ: ಬೆಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಿಕ್ಷೆ ಎದುರಿಸುತ್ತಿರುವ ಕಾರವಾರ ಶಾಸಕ ಸತೀಶ್ ಸೈಲ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ರದ್ದು ಪಡಿಸಿ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರಿಗೆ ಮತ್ತೆ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಪ್ರಕರಣದ ತನಿಖೆಯ ವೇಳೆ ಇಡಿ ಅಧಿಕಾರಿಗಳು ಅವರ ಮನೆ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಪತ್ತೆಹಚ್ಚಿದ್ದರು.

ಆರೋಗ್ಯ ಸಮಸ್ಯೆ ಕಾರಣದಿಂದ ಸೈಲ್ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ, ಹೈಕೋರ್ಟ್ ಅಕ್ಟೋಬರ್ 25ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ನಂತರ, ಜಾಮೀನು ಅವಧಿ ವಿಸ್ತರಣೆಗಾಗಿ ಸಲ್ಲಿಸಿದ ಮನವಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ನವೆಂಬರ್ 7ರವರೆಗೆ ಮಾನ್ಯಗೊಳಿಸಿತ್ತು.

ಆದರೆ ಇದೀಗ ಆ ಮಧ್ಯಂತರ ಜಾಮೀನು ರದ್ದಾಗಿರುವುದರಿಂದ ಸೈಲ್ ಮತ್ತೆ ಕಾನೂನು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಾಗಿದೆ.

Please Share: