ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸೆ.17ರಂದು ಅಂಕೋಲಾದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬೆಳಿಗ್ಗೆ 9.30ಕ್ಕೆ ಕೆ.ಸಿ. ರಸ್ತೆಯಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಲಿದೆ. ಬಳಿಕ 10.30ಕ್ಕೆ ಅಂಕೋಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬೆಡ್, ಹಾಲು ಹಾಗೂ ಹಣ್ಣು-ಹಂಪಲು ವಿತರಿಸಲಾಗುವುದು. ಬೆಳಿಗ್ಗೆ 11.30ಕ್ಕೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಜೆ 6ರಿಂದ 7 ಗಂಟೆಯವರೆಗೆ ಕಾರ್ಯಕರ್ತರು ತಮ್ಮ ತಮ್ಮ ಮನೆಗಳಲ್ಲಿ ‘ಆಶೀರ್ವಾದ ದೀಪ’ ಬೆಳಗಿಸುವ ಅಭಿಯಾನ ನಡೆಸಲಿದ್ದಾರೆ. ಪಕ್ಷದ ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು, ಒಬಿಸಿ ಮೋರ್ಚಾದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಮತ್ತು ಒಬಿಸಿ ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ವಿ. ನಾಯ್ಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗಣಪತಿ ಕರಂಜೇಕರ ಮತ್ತು ಸುಬ್ರಾಯ ವಿ. ನಾಯ್ಕ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


