ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ.17ರಂದು ‘ಸೇವಾ ಸಂಕಲ್ಪ ಅಭಿಯಾನ’ದಡಿ ಪ್ರತಿ ಮನೆಯಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಕಾರವಾರ–ಅಂಕೋಲ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕಿ ರೂಪಾಲಿ ಸಂತೋಷ ನಾಯ್ಕ ಕರೆ ನೀಡಿದ್ದಾರೆ.

Banner Ad

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗಾಗಿ 25 ವರ್ಷಗಳ ಕಾಲ ಸಲ್ಲಿಸಿರುವ ಜನಸೇವೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಅಭಿಯಾನವನ್ನು ಪಕ್ಷ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಂಡಿದೆ ಎಂದು ತಿಳಿಸಿದ್ದಾರೆ.

ಸೆ.17ರಂದು ಸಂಜೆ 6 ಗಂಟೆಯಿಂದ 7 ಗಂಟೆ ನಡುವಿನ ಅವಧಿಯಲ್ಲಿ ಪ್ರತಿ ಮನೆಯಲ್ಲೂ ದೀಪ ಬೆಳಗಿಸಿ, ಪ್ರಧಾನಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುವ ಮೂಲಕ ಅಭಿಮಾನ ಮತ್ತು ಅವರ ಸೇವೆಗೆ ಕೃತಜ್ಞತೆ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

‘ಸೇವಾ ಸಂಕಲ್ಪ ಅಭಿಯಾನ’ದ ಮೂಲಕ ಪ್ರಧಾನಿ ಅವರ ಜನಸೇವೆಯನ್ನು ಸ್ಮರಿಸುವುದರ ಜತೆಗೆ, ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣದ ಸಂಕಲ್ಪವನ್ನು ಮತ್ತಷ್ಟು ಬಲಪಡಿಸೋಣ ಎಂದು ರೂಪಾಲಿ ನಾಯ್ಕ ವಿನಂತಿಸಿದ್ದಾರೆ.

 

Please Share: