ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ನಗರದಲ್ಲಿ ಅಕ್ರಮವಾಗಿ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ದಾಸ್ತಾನು ಮಾಡಿಕೊಂಡಿದ್ದ ಎರಡು ಹೋಟೆಲ್‌ಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮೂರು ಸಿಲೆಂಡರ್‌ಗಳನ್ನು ವಶಕ್ಕೆ ಪಡೆದ ಘಟನೆ ಸೋಮವಾರ ಸಂಜೆ ನಡೆದಿದೆ.
ನಗರದ ಅಯೋಧ್ಯ ಹೋಟೆಲ್ ಹಾಗೂ ಬಸವೇಶ್ವರ ಖಾನಾವಳಿ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿತು. ಈ ವೇಳೆ ಹೋಟೆಲ್‌ನಲ್ಲಿ ಅಕ್ರಮವಾಗಿ ಗೃಹ ಬಳಕೆಯ ಸಿಲೆಂಡರ್‌ಗಳನ್ನು ಸಂಗ್ರಹಿಸಿ ಬಳಸುತ್ತಿರುವುದು ಪತ್ತೆಯಾಗಿದೆ.
ಕಮರ್ಷಿಯಲ್ ಸಿಲೆಂಡರ್ ಸರಬರಾಜಿನಲ್ಲಿ ತೊಂದರೆ ಉಂಟಾದ ಹಿನ್ನೆಲೆಯಲ್ಲಿ, ಕೆಲ ಹೋಟೆಲ್‌ಗಳು ಅಕ್ರಮವಾಗಿ ಗೃಹ ಬಳಕೆಯ ಸಿಲೆಂಡರ್ ದಾಸ್ತಾನು ಮಾಡಿಕೊಂಡಿದ್ದರೆಂಬ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ದಾಳಿಯಲ್ಲಿ ಆಹಾರ ಇಲಾಖೆ ಅಧಿಕಾರಿ ರಾಜೇಶ್ ವಾರಿಕ್ ಹಾಗೂ ಶಿರಸ್ತೇದಾರ್ ದೀಪಕ್ ನಾಯಕ್ ನೇತೃತ್ವದ ತಂಡ ಭಾಗವಹಿಸಿತ್ತು. ಪರಿಶೀಲನೆ ವೇಳೆ ಮೂರು ಗೃಹ ಬಳಕೆಯ ಸಿಲೆಂಡರ್‌ಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
