ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಜಿಲ್ಲೆಯ ಹೊನ್ನಾವರ, ಕಾರವಾರ ಹಾಗೂ ಕುಮಟಾ ತಾಲೂಕುಗಳ ವಿವಿಧ ಪ್ರದೇಶಗಳಲ್ಲಿ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಸೆ.23ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

Banner Ad

ಹೊನ್ನಾವರ ತಾಲೂಕಿನ ಗೇರುಸೊಪ್ಪ ಶಾಖೆಯ ಉಪ್ಪೋಣಿ ಫೀಡರ್‌ನ 11 ಕೆ.ವಿ. ಮಾರ್ಗದ ನಿರ್ವಹಣಾ ಕಾಮಗಾರಿ ನಿಮಿತ್ತ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಉಪ್ಪೋಣಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ತಿಳಿಸಿದ್ದಾರೆ.

ಕಾರವಾರ ಹೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 9.30ರಿಂದ ಸಂಜೆ 6ರವರೆಗೆ ತೇಲಂಗರೋಡ ಫೀಡರ್‌ನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಕಾರವಾರ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ತಿಳಿಸಿದ್ದಾರೆ.

ಕುಮಟಾ ಉಪವಿಭಾಗದ ನಗರ ಶಾಖೆಯ 11 ಕೆ.ವಿ. ಕುಮಟಾ ಟೌನ್ ಹಾಗೂ ಗ್ರಾಮೀಣ ಶಾಖೆಯ 11 ಕೆ.ವಿ. ಧಾರೆಶ್ವರ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ 11 ಕೆ.ವಿ. ಮಾರ್ಗ ಸ್ಥಳಾಂತರ ಕಾಮಗಾರಿ ನಡೆಯಲಿದ್ದು, ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದಲ್ಲದೆ, 33 ಕೆ.ವಿ. ಗೋಕರ್ಣ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಗಂಗಾವಳಿ, ಬಿಜ್ಜೂರ ಹಾಗೂ ಓಂ ಬೀಚ್ ಮಾರ್ಗದ ಎಲ್ಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಅವಧಿಯಲ್ಲಿ ಗ್ರಾಹಕರು ಸಹಕರಿಸುವಂತೆ ಕುಮಟಾ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಮನವಿ ಮಾಡಿದ್ದಾರೆ.

 

 

 

 

 

 

Please Share: