ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಡಾ. ಜಿ.ಎಸ್. ಚಂದ್ರಶೇಖರ್ (ಆದರ್ಶ ಚಾರಿಟಬಲ್ ಟ್ರಸ್ಟ್) ಅವರು ಸಮಾಜಸೇವೆ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 71 ಗಣ್ಯರಿಗೆ 71ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ. 30ರಂದು ಅಧಿಕೃತ ಆದೇಶ ಹೊರಡಿಸಿದೆ.
ಜಾನಪದ, ಸಂಗೀತ, ನೃತ್ಯ, ಚಲನಚಿತ್ರ, ಯಕ್ಷಗಾನ, ಬಯಲಾಟ, ರಂಗಭೂಮಿ, ಶಿಲ್ಪಕಲೆ, ಚಿತ್ರಕಲೆ, ಕರಕುಶಲ, ಕೃಷಿ, ಪರಿಸರ, ವಿಜ್ಞಾನ ಮತ್ತು ತಂತ್ರಜ್ಞಾನ, ಮಾಧ್ಯಮ, ಸಮಾಜಸೇವೆ, ವೈದ್ಯಕೀಯ, ಆಡಳಿತ, ಇಂಜಿನಿಯರಿಂಗ್, ಸಾಹಿತ್ಯ, ಶಿಕ್ಷಣ, ನ್ಯಾಯಾಂಗ, ಹೊರನಾಡು ಹಾಗೂ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಮಾಜಸೇವೆ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಡಾ. ಜಿ.ಎಸ್. ಚಂದ್ರಶೇಖರ್ ಆಯ್ಕೆಯಾಗಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.
ಸಾಧಕರ ಪಟ್ಟಿ ಹೀಗಿದೆ:








