ಕರಾವಳಿ ವಾಯ್ಸ್ ನ್ಯೂಸ್ 

​ಶಿಗ್ಗಾವಿ:ಹಾವೇರಿ ಜಿಲ್ಲಾಡಳಿತದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿಗ್ಗಾವಿ ಕ್ಷೇತ್ರ ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿಯಾಗಿ, ಸಾಹಿತಿಯಾಗಿ ಹಾಗೂ ಕಸಾಪ ತಾಲೂಕ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ನಾಗಪ್ಪ ಬಸಪ್ಪ ಬೆಂತೂರ (ಕಾವ್ಯನಾಮ: ನಾಬಬೆ) ಅವರಿಗೆ ಕನ್ನಡ ರಾಜ್ಯೋತ್ಸವ ಸನ್ಮಾನ ನೀಡಿ ಗೌರವಿಸಲಾಗಿದೆ.

Banner Ad

​ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ, ಪ್ರಧಾನ ಗುರುಗಳಾಗಿ ಹಾಗೂ ಸಮನ್ವಯ ಶಿಕ್ಷಣದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಇವರು, ‘ವಿಶೇಷ ಶಿಕ್ಷಕ ರಾಜ್ಯ ಪ್ರಶಸ್ತಿ-೨೦೨೨’, ‘ಕನಕ ಪ್ರಶಸ್ತಿ-೨೦೨೪’ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

​ಸಾಹಿತ್ಯ ಕ್ಷೇತ್ರದಲ್ಲಿ ಇಗಾಗಲೆ ಹತ್ತು ಪುಸ್ತಕಗಳನ್ನು ಪ್ರಕಟಿಸಿರುವ ಇವರ ಕವನ ಸಂಕಲನಗಳು, ಮಕ್ಕಳ ಸಾಹಿತ್ಯ, ಸಂಪಾದನೆ ಹಾಗೂ ಎನ್.ಪಿ.ಎಸ್ ಮಾರ್ಗದರ್ಶಿ ಕೃತಿಗಳ ಮೂಲಕ ಪರಿಚಿತರಾಗಿರುವ ಇವರು, 2000ಕ್ಕೂ ಅಧಿಕ ವೇದಿಕೆಗಳಲ್ಲಿ ಅತ್ಯುತ್ತಮ ನಿರೂಪಕರಾಗಿ ಕಾರ್ಯನಿರ್ವಹಿಸಿ ರಾಜ್ಯ ಮಟ್ಟದ ಅತ್ಯುತ್ತಮ ನಿರೂಪಕ ಪ್ರಶಸ್ತಿಯನ್ನೂ ಪಡೆದಿದ್ದಾರೆ.

ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತು ಶಿಗ್ಗಾವಿ ತಾಲ್ಲೂಕು ಅಧ್ಯಕ್ಷರಾಗಿ ಕನ್ನಡ ಪರ ಸೇವೆ ಸಲ್ಲಿಸುತ್ತಿದ್ದಾರೆ.

​ಸಾಹಿತ್ಯ, ಶಿಕ್ಷಣ ಹಾಗೂ ಸಂಘಟನಾ ರಂಗದಲ್ಲಿ ಇವರು ಸಲ್ಲಿಸಿರುವ ಹತ್ತು ಹಲವು ಸೇವೆಗಳನ್ನು ಗುರುತಿಸಿ ಜಿಲ್ಲಾಡಳಿತವು ಈ ಗೌರವವನ್ನು ನೀಡಿದ್ದು, ಇವರ ಸಾಧನೆಗೆ ನಾಡಿನ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾಹಿತ್ಯಾಸಕ್ತರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

Please Share: