ಕರಾವಳಿ ವಾಯ್ಸ್ ನ್ಯೂಸ್

ಸಿದ್ದಾಪುರ: ತಾಲೂಕಿನ ಕಾನಸೂರು ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Banner Ad

ಜೂನ್ 9ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ, ಮೃತ ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಪ್ರಕರಣದ ತನಿಖೆಯನ್ನು ಮೂವರು ಪೊಲೀಸ್ ಅಧಿಕಾರಿಗಳ ತಂಡ ನಡೆಸಿದ್ದು, ತನಿಖೆಯ ವೇಳೆ ಸಂಗ್ರಹಿಸಲಾದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಶಿಕ್ಷಕ ಅಬ್ಬು ತಹಲ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾರವಾರ ಡಿವೈಎಸ್‌ಪಿ ಗಿರೀಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

 

Please Share: