ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ತಾಲೂಕಿನ ಉಳಗಾದ ಶಿವಾಜಿ ಶಿಕ್ಷಣ ಸಂಸ್ಥೆಯ ಶಿವಾಜಿ ಸೆಕೆಂಡರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಸೀ ಸೈಡ್ ವತಿಯಿಂದ ವಿದ್ಯಾರ್ಥಿಗಳಿಗೆ ಟೀ-ಶರ್ಟ್ ವಿತರಿಸುವ ಕಾರ್ಯಕ್ರಮ ನಡೆಯಿತು.

Banner Ad

ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕತೆ ಹಾಗೂ ಶಾಲಾ ಚಟುವಟಿಕೆಗಳಲ್ಲಿ ಒಗ್ಗಟ್ಟಿನ ಮನೋಭಾವ ಬೆಳೆಸುವ ಉದ್ದೇಶದಿಂದ ಟೀ-ಶರ್ಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸೀ ಸೈಡ್ ಅಧ್ಯಕ್ಷ ಕಿರಣ್ ಮೋಹನ್ ಉಪಸ್ಥಿತರಿದ್ದು ಮಾತನಾಡಿದರು.

ಶಿವಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುನೀಲ್ ದತ್ತಾ ಗಾಂವಕರ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರ ಹಾಗೂ ವ್ಯಕ್ತಿತ್ವ ರೂಪಿಸುವ ಚಟುವಟಿಕೆಗಳ ಅಗತ್ಯತೆಯನ್ನು ತಿಳಿಸಿದರು.

ಶಾಲೆಯ ಮುಖ್ಯಶಿಕ್ಷಕ ಸುಧೀರ್ ನಾಗೇಕರ, ರೋಟರಿ ಕ್ಲಬ್‌ನ ಸದಸ್ಯರು, ಶಿಕ್ಷಣ ಸಂಸ್ಥೆಯ ಸದಸ್ಯರು ಹಾಗೂ ಶಿವಾಜಿ ಸೆಕೆಂಡರಿ ಪ್ರೌಢಶಾಲೆಯ ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.

 

 

Please Share: